ಪುತ್ತೂರು : ಕೊಳ್ತಿಗೆ ಗ್ರಾಮದ ಕೊರಂಬಡ್ಕ ದೊಡ್ಡಮನೆ ನಿವಾಸಿ ನಿವೃತ್ತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹಾಗೂ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ಮಾಧವ ಗೌಡ (78) ದೊಡ್ಡಮನೆ ಅನಾರೋಗ್ಯದಿಂದಾಗಿ ನಿಧನರಾದರು.

ಮೃತರು ಪತ್ನಿ, ಮಕ್ಕಳು, ಸೊಸೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.


























