ಬೆಂಗಳೂರು : ಡ್ಯಾನ್ಸ್ ಮಾಡುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ.
ಮಂಜುನಾಥ್ ನಗರದ ಗೌತಮ್ ಕಾಲೇಜ್ ಬಳಿ ಈ ಘಟನೆ ಸಂಭವಿಸಿದ್ದು, ಸೊಹೈಲ್ (17) ಹತ್ಯೆಯಾದ ಯುವಕ.
ಮೃತ ಯುವಕ ಸೊಹೈಲ್ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ. ಕಾಲೇಜಿನಲ್ಲಿ ಡ್ಯಾನ್ಸ್ ಮಾಡೋ ವಿಚಾರಕ್ಕೆ ಮೊದಲು ಗಲಾಟೆ ನಡೆದಿದೆ. ಬಳಿಕ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡ ಬಸವೇಶ್ವರ ನಗರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

























