ಪುತ್ತೂರು : ಗರ್ಭಿಣಿ ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಗಾಳಿಮುಖ ನಿವಾಸಿ ಗಂಗಾಧರ್ ಎಂಬವರ ಪತ್ನಿ ಭವ್ಯಶ್ರೀ ರವರು ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಗಾಳಿಮುಖದಿಂದ ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ಪಂಚೋಡಿ ಸಮೀಪ ಭವ್ಯ ರವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಯ ಬಳಿಕ ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಮತ್ತೆ ಅಲ್ಲಿಂದ ತಾಯಿ-ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆ ತರಲಾಗಿದೆ. ತಾಯಿ-ಮಗು ಇಬ್ಬರು ಆರೋಗ್ಯದಿಂದಿದ್ದಾರೆ ಎಂದು ವರದಿಯಾಗಿದೆ.
ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ಅನ್ನು ಚಾಲಕ ರಾಜೇಶ್ ಕುಂಟ್ಟಾಪು ಚಲಾಯಿಸುತ್ತಿದ್ದರು.

ಎರಡನೇ ಬಾರಿ ಘಟನೆ :
ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ನಲ್ಲಿ ಹೆರಿಗೆಯಾಗುತ್ತಿರುವುದು ಎರಡನೇ ಬಾರಿಯಾಗಿದ್ದು, ಈ ಮೊದಲು ಮಹಿಳೆಯೊಬ್ಬರು ಹಿಂದೂ ಜಾಗರಣ ವೇದಿಕೆಯ ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು.

























