ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ಪ್ರಾಣಾಪಾಯವಿಲ್ಲದೆ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ಬಳಿಕ ಸಮೀಪದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಹೊಡೆದ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೇ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.
ಈ ಬಗ್ಗೆ ಸ್ಥಳೀಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























