ಬಂಟ್ವಾಳ : ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಬದಿಯ ಧರೆ ಕುಸಿಯುತ್ತಿದ್ದು, ಶಾಲಾ ಕಟ್ಟಡ ಅಪಾಯದ ಸ್ಥಿತಿಯಲ್ಲಿದೆ.

ಶತಮಾನದತ್ತ ಹೆಜ್ಜೆ ಹಾಕುತ್ತಿರುವ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚಿನ ಹಾನಿ ಸಂಭವಿಸದಂತೆ ಇಲಾಖೆ ಸೂಕ್ತ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.



























