ಉಳ್ಳಾಲ : ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.
ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿ.

ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಉದ್ಯೋಗ ಮಾಡುತ್ತಿದ್ದರು.
ಗುರುವಾರ ಅಪರಾಹ್ನ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ.
ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ .
ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.


























