ಪುತ್ತೂರು : ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಸಿದರು.

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ ನಡೆಯಲಿದೆ.
ನಿಡ್ಪಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.



























