ಉಪ್ಪಿನಂಗಡಿ : ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ ರವರು ಜು.12 ರಂದು ನಿಧನರಾದರು.

ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಅವರು 2022 ರಿಂದ ರಜೆಯಲ್ಲಿದ್ದರು.
ಇಂದು (ಜು.12) ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೃಷ್ಣಪ್ಪ ರವರು ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

























