ವಿಟ್ಲ : ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಂದಳಿಕೆ ವಿದ್ಯಾವರ್ಧಕ ಸಂಘದ ವತಿಯಿಂದ ಯಕ್ಷ ಭಾರತ ಸೇವಾ ಪ್ರತಿಷ್ಠಾನ ಚಂದಳಿಕೆಯ ಅಧ್ಯಕ್ಷರಾದ ಸಂಜೀವ ಪೂಜಾರಿ ಚಂದಳಿಕೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಎಲ್.ಕೆ. ಜಿ ಯುಕೆಜಿ ಮಕ್ಕಳಿಗೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿದರು.

ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ, ಪದಾಧಿಕಾರಿಗಳಾದ ರವೀಶ್ ವಿಟ್ಲ ದೇಜಪ್ಪ ಪೂಜಾರಿ, ತೆರೇಸಾ, ವಿಟ್ಲ ಪಟ್ಟಣ ಪಂಚಾಯತ್ ಕೌನ್ಸಿಲರ್ ರಕ್ಷಿತಾ ಸನತ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುಮತಿ ದೇಜಪ್ಪ, ಉಪಾಧ್ಯಕ್ಷರಾದ ಮೊಹಮ್ಮದ್ ಜಾಫರ್, ಅನಿಲ್ ವಡಗೇರಿ ಎಸ್ ,ಎಲ್, ವಿ ,ಯೋಗೀಶ್ ಮುಖ್ಯೋಪಾಧ್ಯಾಯರಾದ ಬಿ ವಿಶ್ವನಾಥಗೌಡ ಕುಳಲು, ಚಂದಳಿಕೆ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು,ಶಿಕ್ಷಕ ವೃಂದ ಉಪಸ್ಥಿತರಿದ್ದರು.


























