ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಕಲ್ಲೇರಿ ಎಂಬಲ್ಲಿ ನಡೆದಿದೆ.
ಕೆ. ಶೇಖರ (46), ಎಸ್. ಮುಸ್ತಾಫ (34), ಶ್ರೀನಾಥ (30), ಕೆ. ರಮೇಶ (48), ಎಂ.ಎ ಅಬ್ದುಲ್ ಲತೀಫ್ (47( ಬಂಧಿತರು.
ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಉಪಯೋಗಿಸಿದ ಇಸ್ಪೀಟ್ ಎಲೆಗಳನ್ನು ಹಾಗೂ ಇತರೆ ಸೊತ್ತುಗಳನ್ನು ಹಾಗೂ ರೂ 6680/- ನಗದು ಹಣವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 93/2023 ಕಲಂ:87 ಕೆ.ಪಿ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

























