ವಿಟ್ಲ : ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ–ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.

ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಇಂದು ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದಿದೆ.
ಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ.
ಕೋಳಿ ಸಾಗಾಟದ ಪಿಕಪ್ ಗೆ ಅಪಘಾತವಾಗಿದ್ದು, ಅಪಘಾತದಿಂದ ನೂರಾರು ಕೋಳಿಗಳು ಸತ್ತಿವೆ ಎನ್ನಲಾಗಿದೆ.
ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು. ಮಹಿಳೆಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಆಗಮಿಸಿದ್ದು, ಫ್ರೆಂಡ್ಸ್ ವಿಟ್ಲ ತಂಡ ಕ್ರೇನ್ ಬಳಸಿ ಕಾರ್ಯಾಚರಣೆ ನಡೆಸಿ ವಾಹನ ಮೇಲೆತ್ತಲಾಯಿತು.
ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಷಯ ತಿಳಿದ ಹಿನ್ನೆಲೆ ಅವರು ಕೂಡ ಘಟನಾ ಸ್ಥಳಕ್ಕೆ ಆಗಮಿಸಿದ್ದರು.




























