ಪುತ್ತೂರು : ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ನಲ್ಲಿ
ಇಬ್ಬರು ಸದಸ್ಯರ ನಿಧನದಿಂದಾಗಿ ತೆರವಾಗಿರುವ ಎರಡು ಸ್ಥಾನಗಳಿಗೆ ಜು.23 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಕೂಡ ಕಣಕ್ಕಿಳಿದಿದ್ದು, ಈ ಬಾರಿಯೂ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಬ್ಯಾಟ್ ಚಿಹ್ನೆ ಲಭ್ಯವಾಗಿದೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್ ಕುಮಾರ್ ಪುತ್ತಿಲ ರವರಿಗೂ ಬ್ಯಾಟ್ ಚಿಹ್ನೆ ದೊರೆತಿದ್ದು, ಈ ಬಾರಿ ಗ್ರಾಮಪಂಚಾಯತ್ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೂ ಬ್ಯಾಟ್ ಚಿಹ್ನೆ ದೊರೆತಿದೆ.
ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ಹಾಗೂ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಕಣದಲ್ಲಿದ್ದಾರೆ.
ಯಾರಿಗೆ ಯಾವ ಚಿಹ್ನೆ..!??
ನಿಡ್ಪಳ್ಳಿ ಗ್ರಾಮ ಪಂಚಾಯತ್ ನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು – ತೆಂಗಿನತೋಟ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ – ಮೇಜು
ಆರ್ಯಾಪು ಗ್ರಾಮ ಪಂಚಾಯತ್ ನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ- ವಜ್ರ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು-ಮೇಜು ಚಿಹ್ನೆ ಪಡೆದುಕೊಂಡಿದ್ದಾರೆ.
ಜು.23 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ಪ್ರಕ್ರಿಯೆಗಳು ನಡೆಯಲಿದೆ. ಅವಶ್ಯವಿದ್ದರೆ ಜ.25 ರಂದು ಮರುಮತದಾನ ನಡೆದು ಜು.26 ರಂದು ಮತ ಎಣಿಕೆ ನಡೆಯಲಿದೆ.

























