ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಶ್ ಕೆ.ವಿ. ಗುರುವಾರ ಆದೇಶ ಹೊರಡಿಸಿದ್ದಾರೆ
ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೇ 7ರಿಂದ ಬೆಳಗ್ಗೆ 6ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ.
10 ಗಂಟೆಯ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು ಎಂದು ಹೇಳಿದ್ದಾರೆ.ವಾಹನಗಳಲ್ಲಿ ಬೇರೆ ಕಡೆ ಹೋದವರ ವಾಹನ ಸೀಝ್ ಮಾಡುವಂತೆ ಪೊಲೀಸರಿಗೆ ಸೂಚಿಸಿರುವ ಜಿಲ್ಲಾಧಿಕಾರಿ, ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ ನೀಡಿದ್ದಾರೆ.
ಮೇ 15ರ ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ಇಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಮೇ 15ರ ಮೇಲೆ ಅನುಮತಿ ನೀಡಿರುವ ಎಲ್ಲಾ ರೀತಿಯ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗಿದೆ. ಕಾರ್ಯಕ್ರಮದ ದಿನಾಂಕ ನಿಗದಿಪಡಿಸಿದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.