ಪುತ್ತೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ಪದಾಧಿಕಾರಿಗಳ ಜೊತೆ ಟಿಫಿನ್ ಬೈಠಕ್ ನಡೆಸಿದರು.


ಈ ಸಂದರ್ಭದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 9 ವರ್ಷಗಳ ಸಾಧನೆ ಬಗ್ಗೆ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಮಾಜಿ ಶಾಸಕ ಸಂಜೀವ ಮಠಂದೂರು, ಬೂಡಿಯಾರು ರಾಧಾಕೃಷ್ಣ ರೈ, ಜೀವಂಧರ್ ಜೈನ್, ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಆಶಾ ತಿಮ್ಮಪ್ಪ, ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ರಾಮದಾಸ್ ಬಂಟ್ವಾಳ, ಅಪ್ಪಯ್ಯ ಮಣಿಯಾಣಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.



























