ಪುತ್ತೂರು : ಮಹಿಳೆಯೊಬ್ಬರು ಆಂಬ್ಯುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಕೆದಿಲ ನಿವಾಸಿ ಬಿ. ಮಹಮ್ಮದ್ ಎಂಬವರ ಪತ್ನಿ ಮಮ್ತಾಜ್ ಸರಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಹೆರಿಗೆಗೆಂದು ಮಮ್ತಾಜ್ ರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮಾಣಿ ತಲುಪಿದಾಗ ಅವರು ಆಂಬ್ಯುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಹಾಗೂ ಮಗುವನ್ನು ಮತ್ತೆ ಪುತ್ತೂರು ಆಸ್ಪತ್ರೆಗೆ ಕರೆ ತರಲಾಗಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆಂದು ವರದಿಯಾಗಿದೆ.
























