ಮಂಗಳೂರು : ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 6.00 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುತ್ತದೆ.
ವಾರಂತ್ಯದ ಕರ್ಪ್ಯೂಗೆ
ಮಾರ್ಗಸೂಚಿಗಳು :
!. ಔಷಧಿ ಅಂಗಡಿಗಳು ಮತ್ತು ಆಸ್ಪತ್ರಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಿದ, ಸಾರ್ವಜನಿಕರು ಈ ಸೇವೆಗಳನ್ನು ತಮ್ಮ ಹತ್ತಿರದ ಅಂಗಡಿಗಳಿಂದ
ಮಾತ್ರವೇ ಪಡೆಯತಕ್ಕದ್ದು.
ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24/7 ಕಾರ್ಯಾಚರಣೆಗಳ ಅಗತ್ಯವಿರುವ ಕೈಗಾರಿಕೆಗಳು |ಕಂಪನಿಗಳು / ಸಂಸ್ಥೆಗಳು ಮಾತ್ರವೇ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ಈ ಸಂದರ್ಭದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. ಆದಾಗ್ಯೂ ನಿರ್ಮಾಣ ಚಟುವಟಿಕೆಗಳು ನಡೆಯುವ ಸ್ಥಳದಲ್ಲಿಯೇ ಕಾರ್ಮಿಕರು ಲಭ್ಯವಿದ್ದು, ಹೊರಗಿನ ಪ್ರದೇಶಗಳಿಂದ ಕಾರ್ಮಿಕರನ್ನು ಕರೆತರುವ ಅಗತ್ಯತೆಯಿಲ್ಲದಿದ್ದಲ್ಲಿ ಅಂತಹ ನಿರ್ಮಾಣ ಕಾರ್ಯಗಳನ್ನು ನಡೆಸಬಹುದಾಗಿರುತ್ತದೆ.
ರೋಗಿಗಳು ಮತ್ತು ಅವರ ಪರಿಚಾರಕರು / ವೈದ್ಯಕೀಯ ತುರ್ತು ಸಂದರ್ಭದಲ್ಲಿ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.
ದಿನಾಂಕ 08-09-2021 ಮತ್ತು 09.05.2021 ರಂದು ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ಜನರ ಪರಿಮಿತಿಗೊಳಪಟ್ಟು (CVD 19) ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸಿಕೊಂಡು
ನಡೆಸಲು ಅನುಮತಿ ನೀಡಲಾಗಿದೆ.
ಶವಸಂಸ್ಕಾರ : ಅಂತ್ಯಕ್ರಿಯಗಳನ್ನು ಗರಿಷ್ಠ 3 ಜನರ ಪರಿಮಿತಗೊಳಪಟ್ಟು COVID 19 ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸಿಕೊಂಡು ನಡೆಸುವುದು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೇಲಿನ ಆದೇಶವನ್ನು ಯಾವುದೇ ವ್ಯಕ್ತಿ ವ್ಯಕ್ತಿಗಳು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 20O5 ರ
ಕಲಂ 51 ರಿಂದ 60 ರನ್ವಯ , ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು. ಎಂದು ಜಿಲ್ಲಾಧಿಕಾರಿಯವರು ಆದೇಶವನ್ನು ಹೊರಡಿಸಿದ್ದಾರೆ.