ಬೆಂಗಳೂರು : 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ನಡೆಯಲಿದೆ. ಈ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಪ್ರಕರಣದ ತನಿಖೆಯನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ ಭಾರಿ ಸದ್ದು ಮಾಡಿತ್ತು.

























