ಸವಣೂರು : ಸವಣೂರು ಯುವಕ ಮಂಡಲ (ರಿ.) ವತಿಯಿಂದ ‘ಕೆಸರ್ಡೊಂಜಿ ದಿನ’ ಕಾರ್ಯಕ್ರಮ ಸವಣೂರು ಬಸದಿ ವಠಾರದ ನಿರ್ಮಲ್ ಕುಮಾರ್ ಜೈನ್ ರವರ ಗದ್ದೆಯಲ್ಲಿ ಜು.23 ರಂದು ನಡೆಯಲಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಂಸದರಾದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ನೋಟರಿ ವಕೀಲರಾದ ನಿರ್ಮಲ್ ಕುಮಾರ್ ಜೈನ್ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ಪುದುಬೆಟ್ಟು ಜಿನ ಬಸದಿ ಆಡಳಿತ ಮೊಕ್ತೇಸರರಾದ ಶತ್ರುಂಜಯ ಆರಿಗ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ವಿ. ಶೆಟ್ಟಿ, ಸವಣೂರು ಪ್ರಾ.ಕೃ.ಪ.ಸ.ಸಂ.ನಿ. ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ್ ಸುಲಾಯ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷರಾದ ದಿನೇಶ್ ಮೆದು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ರೈ ಸೂಡಿಮುಳ್ಳು, ಸವಣೂರು ಪ್ರಾ.ಕೃ.ಪ.ಸ.ಸಂ.ನಿ. ಉಪಾಧ್ಯಕ್ಷರಾದ ತಾರಾನಾಥ ಕಾಯರ್ಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕೆ. ಸವಣೂರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

























