ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಬಾಂಬಿಲ ತಿರುವಿನಲ್ಲಿ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಬಿದ್ದಿದೆ.
ಲಾರಿ ಪಲ್ಟಿಯಾಗಿದ್ದು, ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ ಎನ್ನಲಾಗಿದೆ.
ಮನೆಯ ಮಹಡಿಯ ಮೇಲೆ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.
























