ಕಡಬ : ಮಳೆಯ ಕಾರಣದಿಂದಾಗಿ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಜು.24) ರಜೆ ಘೋಷಿಸಿ ಕಡಬ ತಹಶೀಲ್ದಾರ್ ಆದೇಶಿಸಿದ್ದಾರೆ.
ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಕಡಬ ತಹಶೀಲ್ದಾರ್ ಇಂದು ರಜೆ ಘೋಷಣೆ ಮಾಡಿದ್ದಾರೆ.
ದ.ಕ ಜಿಲ್ಲೆಯಾದ್ಯಾಂತ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳು ನೀರಿನ ಮಟ್ಟ ಮೀರಿ ಹರಿಯುತ್ತಿದೆ.
























