ಉಡುಪಿ: ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂಬಾತ ನೀರು ಪಾಲಾಗಿದ್ದಾನೆ.

ಶರತ್ ನೀರಿಗೆ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಶರತ್ ಕುಮಾರ್ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ. ಈ ವೇಳೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ. ಜಲಪಾತ ನೊಡುತ್ತಿದ್ದಂತೆಯೇ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಸದ್ಯ ಯುವಕನ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























