ವಿಟ್ಲ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಘಟನೆಯಲ್ಲಿ ಇನ್ನೋವಾ ಕಾರಿನ ಮುಂಭಾಗ ನಜ್ಜು-ಗುಜ್ಜಾಗಿದೆ.



























