ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ದೀಪಪ್ರಜ್ವಲನ ಮಾಡಿ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಐಕ್ಯೂಎಸಿ ಸಂಯೋಜಕರು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

























