ಪುತ್ತೂರು : ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ಪುತ್ತೂರು ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿ ದಂಡ ವಿಧಿಸಿದ ಘಟನೆ ನಡೆದಿದೆ.

ಪುತ್ತೂರು ಮುಖ್ಯರಸ್ತೆಯ ಅಂಗಡಿಗಳು ಮತ್ತು ವಾಣಿಜ್ಯ ಮಳಿಗೆಗಳು ಸೇರಿದಂತೆ ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು 12 ಕೆ.ಜಿ ಯಷ್ಟು ಪ್ಲಾಸ್ಟಿಕ್ ಗಳನ್ನು ವಶಪಡಿಸಿ ದಂಡ ವಿಧಿಸಿದ್ದಾರೆ.

ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿಯರಾದ ಶ್ವೇತಾ ಕಿರಣ್, ವರಲಕ್ಷ್ಮೀ, ಸೂಪರ್ ವೈಸರ್ ಗಳಾದ ನಾಗೇಶ್ ಮತ್ತು ಅಮಿತ್, ರಾಧಾಕೃಷ್ಣ ಸಹಿತ ಪೌರಕಾರ್ಮಿಕರು ಉಪಸ್ಥಿತರಿದ್ದರು.




























