ಪುತ್ತೂರು : ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರದ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
“ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು ಆಗಿಲ್ಲ.., ಕೋರ್ಟ್ ಅನುಮತಿ ಬಳಿಕವಷ್ಟೇ ಎಫ್.ಐ.ಆರ್ ದಾಖಲಿಸಲಾಗುವುದು” ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿದ್ದು, ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಮೆರವಣಿಗೆ ನಡೆಸಿದ್ದ ಪುತ್ತಿಲ ಪರಿವಾರ ವಿರುದ್ದ ಪೊಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ ಎಂಬ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ನ್ಯಾಯಾಲಯದ ಅನುಮತಿ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ..




























