ಬೆಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಕಾಲೇಜಿನ ವೀಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, ‘ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವೀಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?’ ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
ತುಮಕೂರು ಮೂಲದ ಶಕುಂತಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.




























