ಮಂಗಳೂರು : ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ (69) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ.
ಮೃತರ ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.


























