ಪುತ್ತೂರು : ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರ್ಕಾರವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದ್ದು, ಕೊರೋನ ಹರಡುವಿಕೆ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕುವ ಸಲುವಾಗಿ ಇಂದು ಸಂಚಾರಿ ಪೊಲೀಸರು ಎಲ್ಲಾ ವಾಹನಗಳನ್ನು ನಿಲ್ಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪುತ್ತೂರು ಪೇಟೆಯಲ್ಲಿ ಸಂಚಾರಿ ಪೊಲೀಸರು ಬ್ಯಾರಿಕೇಡ್ ಇಟ್ಟು ವಾಹನಗಳಲ್ಲಿ ಪೇಟೆಗೆ ಬರುವವರನ್ನು ನಿಲ್ಲಿಸಿ ವಿಚಾರಣೆ ನಡೆಸುವ ದೃಶ್ಯವು ಪೇಟೆಯಲ್ಲಿ ಕಂಡು ಬಂದಿತು.