ಬಂಟ್ವಾಳ : 28 ವರುಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ. 232/1995 ಕಲಂ 324,355,506(ii) ಜೊತೆಗೆ 34 ಐಪಿಸಿ ಪ್ರಕರಣದ ಆರೋಪಿಯಾಗಿದ್ದ ಪದ್ಮನಾಭ ಎಂಬಾತನು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.
ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.




























