ಪುತ್ತೂರು : ಆ.12-13 ರಂದು ಸೆಪ್ಟೆಂಬರ್ 3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವ ತಯಾರಿಯ ತರಬೇತಿ ಶಿಬಿರವು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರಿನಲ್ಲಿ ನಡೆಯಲಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ವಿದ್ಯಾಮಾತಾ ಅಕಾಡೆಮಿಯ ಆಡಳಿತ ಮಂಡಳಿಯು ತಿಳಿಸಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತು ಪಡೆದ ಅಭ್ಯರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುವುದನ್ನು ಗಮನಿಸಿರಬಹುದು. ಈ ನಿಟ್ಟಿನಲ್ಲಿ ಈ ವರ್ಷವೂ TET ನ ತರಬೇತಿಯನ್ನು ಆಯೋಜಿಸಲಾಗಿದ್ದು ತರಬೇತಿಯಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಬಿರಾರ್ಥಿಗಳಿಗೆ ಅಧ್ಯಯನಕ್ಕೆ ಸಂಬಂಧಿಸಿದ ಪೂರ್ವ ತಯಾರಿ ತರಬೇತಿ ಜೊತೆಗೆ ಸಂಪೂರ್ಣ ಅಧ್ಯಯನ ಸಾಮಗ್ರಿಗಳನ್ನು ಕೂಡ ಒದಗಿಸಲಾಗುತ್ತದೆ.
ಶಿಬಿರವು ಶನಿವಾರ ಮತ್ತು ಭಾನುವಾರದಂದು ಬೆಳಿಗ್ಗೆ 10:೦೦ ರಿಂದ ಸಾಯಂಕಾಲ 4:೦೦ ರವರೆಗೆ ನಡೆಯಲಿರುವುದು. ದೂರದ ಊರಿನಿಂದ ಆಗಮಿಸುವವರಿಗೆ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ
ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎಪಿಯಂಸಿ ರಸ್ತೆ, ಪುತ್ತೂರು (ದ.ಕ) 9620468869 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.