ಉಪ್ಪಿನಂಗಡಿ: ಕೌಟುಂಬಿಕ ಕಾರಣದಿಂದಾಗಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ನಡೆದಿದೆ.
ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಸತೀಶ್ ನಾಯಕ್ ಎಂಬವರ ಪತ್ನಿ ಮೈಥಿಲಿ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಕೃತ್ಯ ನಡೆದಾಕ್ಷಣ ಮನೆಯಲ್ಲಿಯೇ ಇದ್ದ ಪತಿ ಬಾಗಿಲು ಒಡೆದು ಆಕೆಯನ್ನು ರಕ್ಷಿಸಲು ಮುಂದಾದರಾದರೂ, ಆಸ್ಪತ್ರೆಗೆ ಕರೆತರುವ ವೇಳೆ ಆಕೆ ಸಾವನ್ನಪ್ಪಿದ್ದಾಳೆಂದು ತಿಳಿದು ಬಂದಿದೆ. ಉಪ್ಪಿನಂಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.