ಪೆರುವಾಜೆ : ಪೆರುವಾಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಮುಕ್ಕೂರು ವಾರ್ಡ್ ಸದಸ್ಯ ಜಗನ್ನಾಥ ಪೂಜಾರಿ ಮುಕ್ಕೂರು ಅವಿರೋಧವಾಗಿ ಆಯ್ಕೆಯಾದರು.

ಮುಂದಿನ ಎರಡುವರೆ ವರ್ಷಕ್ಕೆ ನೂತನ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಆ.9 ರಂದು ಪೆರುವಾಜೆ ಗ್ರಾ.ಪಂ.ನಲ್ಲಿ ನಡೆಯಿತು.
ಉಪಾಧ್ಯಕ್ಷರಾಗಿ ಮುರ್ಕೇತ್ತಿ ವಾರ್ಡ್ ಸದಸ್ಯೆ ಶಹಿನಾಜ್ ಅವರು ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಜಗನ್ನಾಥ ಪೂಜಾರಿ ಮುಕ್ಕೂರು ಅವರಿಗೆ ಸದಸ್ಯ ಸಚಿನ್ ರಾಜ್ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಹಿನಾಜ್ ಅವರಿಗೆ ಸದಸ್ಯೆ ಗುಲಾಬಿ ಬೊಮ್ಮೆಮಾರು ಸೂಚಕರಾಗಿದ್ದರು.
ಮೂರನೇ ಬಾರಿಗೆ ಅಧ್ಯಕ್ಷ ಸ್ಥಾನ
ಜಗನ್ನಾಥ ಪೂಜಾರಿ ಮುಕ್ಕೂರು ಅವರು ಪೆರುವಾಜೆ ಗ್ರಾ.ಪಂ.ನ ಮೊದಲ ಅವಧಿಯಲ್ಲಿಯು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿಂದೆ ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.
ಮುಕ್ಕೂರು ವಾರ್ಡ್ ನಿಂದ ನಾಲ್ಕು ಅವಧಿಯಿಂದ ಸದಸ್ಯರಾಗಿ ಪ್ರತಿನಿಧಿಸುತ್ತಿದ್ದಾರೆ. ಜಗನ್ನಾಥ ಪೂಜಾರಿ ಮುಕ್ಕೂರು ಅವರು ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.