ಬಂಟ್ವಾಳ : ಕೆದಿಲ ಗ್ರಾಮ ಪಂಚಾಯತಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ. ಬಿಜೆಪಿ ಬೆಂಬಲಿತ ಮೂವರು ಸದಸ್ಯರಿಗೆ ಹಣ ಮತ್ತು ಅಧಿಕಾರದ ಆಮಿಷ ತೋರಿಸಿ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ ಎಂದು ಪುಣಚ ಮಹಾಶಕ್ತೀ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ ಆರೋಪಿಸಿದ್ದಾರೆ.
ಬಿಜೆಪಿ ಬೆಂಬಲದಿಂದ ಗೆದ್ದು ಬಂದು ಇದೀಗ ಕಾಂಗ್ರೇಸ್ ಸೇರಿರುವ ಸದಸ್ಯರು ಪಾರ್ಟಿಗೆ ಮತ್ತು ಕಾರ್ಯಕರ್ತರಿಗೆ ದ್ರೋಹ ಮಾಡಿದ್ದಾರೆ. ಅವರು ಪಂಚಾಯತ್ ಸದಸ್ಯತನಕ್ಕೆ ರಾಜೀನಾಮೆ ನೀಡಿ ಅದೇ ವಾರ್ಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಿಂತು ಗೆದ್ದು ತೋರಿಸಲಿ ಎಂದು ಅವರು ಸವಾಲೆಸಿದ್ದಾರೆ.