ವಿಟ್ಲ : ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಮತ್ತು ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಗಸ್ಟ್ 10 ರಂದು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ವಿಟ್ಲ ಪೊಲೀಸ್ ಠಾಣೆಯ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಆದ ವಿದ್ಯಾ ಭಾಗವಹಿಸಿ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಹೆಡ್ ಕಾನ್ಸ್ಟೇಬಲ್ ಆದ ಚಿತ್ರಲೇಖ, ಶಾಲಾ ಪ್ರಾಂಶುಪಾಲರಾದ ಜಯರಾಮ್ ರೈ, ಉಪ ಪ್ರಾಂಶುಪಾಲರಾದ ಜ್ಯೋತಿ ಶೈಣೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಫಾತಿಮಾ ರಾಶಿಫಾ ನಿರೂಪಿಸಿ, ಶೈಮ ಸ್ವಾಗತಿಸಿ ನಿವೇದಿತಾ ವಂದಿಸಿದರು.