ವಿಟ್ಲ : ಕೇಪು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಗ್ರಂಥ ಪಾಲಕರ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಆವರಣ ಗ್ರಂಥಾಲಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ನಿವೃತ್ತ ಶಿಕ್ಷಕರಾದ ರೇವತಿ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಬಾಬು ನಾಯ್ಕ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತಿ ಕಾರ್ಯದರ್ಶಿಯಾದ ರಾಮ ನಾಯ್ಕ, ಸಿಬ್ಬಂದಿಯಾದ ಚಂದ್ರಶೇಖರ್, ಗ್ರಂಥಾಲಯ ಮೇಲ್ವಿಚಾರಕಿ ಭವ್ಯ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಕ್ವಿಜ್ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ನೀರ್ಕದ ಶಾಲೆಯ ಮಕ್ಕಳು ಭಾಗವಹಿಸಿದ್ದರು.