ವಿಟ್ಲ : ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣವನ್ನು ನಿವೃತ್ತ ಯೋಧ ಹರಿಣ್ ಕುಮಾರ್ ನೆರವೇರಿಸಿದರು.

ಪಟ್ಟಣ ಪಂಚಾಯತ್ ಸದಸ್ಯ ರವೀಶ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಮಾನಾಥ ವಿಟ್ಲ, ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರುಗಳಾದ ರವಿಶಂಕರ ಸಿ ಮತ್ತು ಶಾರದ ಹಾಗೂ ಸದಸ್ಯರು, ಮುಖ್ಯ ಶಿಕ್ಷಕರುಗಳಾದ ಅನ್ನಪೂರ್ಣ ಮತ್ತು ವಾರಿಜ ಕುಮಾರಿ, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.
