ವಿಟ್ಲ : ಸೌಜನ್ಯಳಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಹಿಂದೂ ಹೋರಾಟ ಸಮಿತಿ ವಿಟ್ಲ ತಾಲೂಕು ಆಯೋಜಿಸುವ ಬೃಹತ್ ಪ್ರತಿಭಟನಾ ಸಭೆಯು ಆ.20 ರಂದು ವಿಟ್ಲ ಜಂಕ್ಷನ್ ನಲ್ಲಿ ನಡೆಯಲಿದೆ .
ಈ ಪ್ರತಿಭಟನಾ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತರಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಳ ತಾಯಿ ಕುಸುಮಾವತಿಯವರು ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
