ಪುತ್ತೂರು : ಪಾಣಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮೈಮೂನತುಲ್ ಮೆಹ್ರಾ ಮತ್ತು ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಜಯಶ್ರೀ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಉಪಾಧ್ಯಕ್ಷ ಅಬೂಬಕ್ಕರ್ ಪಕ್ಷೇತರರಾಗಿ, ಬಿಜೆಪಿ ಬೆಂಬಲಿತ ಸದಸ್ಯ ಸುಭಾಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮೈಮೂನತುಲ್ ಮೆಹ್ರಾ ನಾಮಪತ್ರ ಸಲ್ಲಿಸಿದ್ದರು.

ಒಟ್ಟು 10 ಸದಸ್ಯ ಬಲದ ಪಾಣಾಜೆ ಗ್ರಾ.ಪಂ ನಲ್ಲಿ ಬಿಜೆಪಿ ಬೆಂಬಲಿತ 5 ಸದಸ್ಯರು, ಕಾಂಗ್ರೆಸ್ ಬೆಂಬಲಿತ 3 ಸದಸ್ಯರು ಹಾಗೂ 2 ಪಕ್ಷೇತರ ಸದಸ್ಯರಿದ್ದಾರೆ.
ಕೊನೆ ಕ್ಷಣದಲ್ಲಿ ಪಕ್ಷೇತರ ಅಭ್ಯರ್ಥಿ ಅಬೂಬಕ್ಕರ್ ನಾಮಪತ್ರ ಹಿಂಪಡೆದುಕೊಂಡರು. ಬಳಿಕ ನಡೆದ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ತಲಾ 5 ಮತಗಳನ್ನು ಪಡೆದಿದ್ದರು. ಚೀಟಿ ಹಾಕುವ ಮೂಲಕ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮೈಮೂನತುಲ್ ಮೆಹ್ರಾಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ.
ಸಾಮಾನ್ಯ ಮಹಿಳೆ ವರ್ಗದ ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಜಯಶ್ರೀ ಮತ್ತು ಕಾಂಗ್ರೆಸ್ ಬೆಂಬಲಿತ ವಿಮಲ ನಾಮಪತ್ರ ಸಲ್ಲಿಸಿದ್ದು, 6 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯೆ ಜಯಶ್ರೀ ಉಪಾಧ್ಯಕ್ಷೆಯಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿಮಲ 4 ಮತಗಳನ್ನು ಪಡೆದುಕೊಂಡಿದ್ದಾರೆ.