ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಊಹಾಪೋಹಗಳು ಕೇಳಿಬಂದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಮುಂದುವರಿಯುತ್ತೆ. ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಅಂತ್ಯದ ಬಳಿಕ ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಯೋಜನೆ ನಿಲ್ಲಿಸಲಾಗುತ್ತೆ ಎಂಬ ಊಹಾಪೋಹ ಹಬ್ಬಿಸುತ್ತಿದ್ದಾರೆ. ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು.