ಬಂಟ್ವಾಳ : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ.
ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಬಂಟ್ವಾಳ ಮಂಡಲದ ಸದಸ್ಯ, ಪೆರಾಜೆ ಭಾಗದ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೃತ ಯುವಕ.

ಪ್ರಶಾಂತ್ ನಿನ್ನೆ ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ…
ಪ್ರಶಾಂತ್ ನೇರಳಕಟ್ಟೆಯಲ್ಲಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದರು.
ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹದಿಂದಿದ್ದರು. ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ ಅವರು ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಅವರು ಪ್ರಸ್ತುತ ಸದಸ್ಯರಾಗಿದ್ದರು..