ಪುತ್ತೂರು : ಮಾಣಿಲ ಶ್ರೀಧಾಮದಲ್ಲಿ ಆ.25ರ ವರೆಗೆ ನಡೆಯುವ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀಲಕ್ಷ್ಮೀಪೂಜೆ ಹಾಗೂ ಆ.25 ರಿಂದ ಆ.27ರವರೆಗೆ ಶ್ರೀವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಹೊರೆಕಾಣಿಕೆ ಸಮಿತಿ ನೇತೃತ್ವದಲ್ಲಿ ಆ.18 ರಂದು ಹೊರೆಕಾಣಿಕೆ ಸ್ವೀಕೃತಿ ಕಚೇರಿ ತೆರೆಯಲಾಯಿತು.


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯ ಬಳಿಯಲ್ಲಿ ತೆರೆಯಲಾದ ಹೊರೆಕಾಣಿಕೆ ಸ್ವೀಕೃತಿ ಕಚೇರಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಐತಪ್ಪ ನಾಯ್ಕ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಪುತ್ತೂರು ವಲಯ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಪುತ್ತೂರು ವಲಯ ಸಮಿತಿ ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ರಾಜೇಶ್ ಬನ್ನೂರು, ಅಜಿತ್ ರೈ ಹೊಸಮನೆ, ನವೀನ್ ಕುಲಾಲ್, ವಿಶ್ವನಾಥ್ ಗೌಡ ಬನ್ನೂರು ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹೊರಕಾಣಿಕೆ ಸಮರ್ಪಿಸಿದ ಭಕ್ತರಿಗೆ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಿಂದ ಪ್ರಸಾದವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.




























