ಪುತ್ತೂರು : ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಎಂಬವರು ವೀಡಿಯೋ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವೀಡಿಯೋ ಮಾಡಿದ ನಾಸಿರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.


























