ವಿಟ್ಲ : ಹಾಡುಹಗಲೇ ಇರಿದು ಕೊಲೆ ಮಾಡಿದ ಕೃತ್ಯವನ್ನು ಸಮಗ್ರ ತನಿಖೆ ನಡೆಸಿ ಆರೋಪಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದ ರೀತಿಯಲ್ಲಿ ಶಿಕ್ಷೆ ವಿಧಿಸಿ ಬಡ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಪೊಲೀಸ್ ಇಲಾಖೆಯನ್ನು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಒತ್ತಾಯಿಸಿದ್ದಾರೆ.
ಯುವತಿಯನ್ನು ಹಾಡಹಗಲೇ ಕೊಲೆ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಎಂದು ತಿಳಿಸಿದರು.























