ಪುತ್ತೂರು : ನಗರ ಠಾಣೆಯಲ್ಲಿ ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ರವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ ಠಾಣೆಗೆ ಪಿಎಸ್ ಐ (ಸಂಚಾರ) ನೇಮಕ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕರು ಆದೇಶಿಸಿದ್ದಾರೆ.
ಶ್ರೀಕಾಂತ್ ರಾಥೋಡ್ ರವರು ಕಡಬ, ಉಪ್ಪಿನಂಗಡಿ, ಪುತ್ತೂರು ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ತಮ್ಮ ದಕ್ಷ ಮತ್ತು ಪ್ರಾಮಾಣಿಕ ಸೇವೆಯಿಂದಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.


























