ಮಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎಂಡಿಎಂಎ ಮಾರುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಸೆರೆ ಹಿಡಿದಿದ್ದಾರೆ.
ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು(33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚುನನ್ನು ಬಂಧಿಸಿದ್ದಾರೆ.

ಸುರತ್ಕಲ್ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ ಎಂಡಿಎಂಎ ಮಾರುವಾಗ ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಬಂಧಿತರಿಂದ 2.6 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಬಂಧಿತ ಆರೋಪಿಗಳ ಮೇಲೆ ಈ ಹಿಂದೆ ಕೊಲೆಯತ್ನ, ಹಲ್ಲೆ, ಸರಗಳ್ಳತನ, ಮನೆಗಳ್ಳತನ, ವಾಹನ ಕಳ್ಳತನ ಪ್ರಕರಣ ದಾಖಲಾಗಿತ್ತು.

ಹಲವು ಮಾರ್ಗಗಳ ಮೂಲಕ ಮಂಗಳೂರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























