ಬಂಟ್ವಾಳ : ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬ್ರಹ್ಮಗಿರಿ , ಗೋವಿನ ತೋಟ ,ಪುದು ಬಂಟ್ವಾಳ ಮತ್ತು ಗೋ ಸೇವಾ ಗತಿವಿಧಿ, ಕರ್ನಾಟಕ ಇವರ ಆಶ್ರಯದಲ್ಲಿ ಧರ್ಮಾಧಾರಿತ ವಿಶ್ವಗುರು ಭಾರತಕ್ಕಾಗಿ ಅಷ್ಟೋತ್ತರ ಶತ (108) ಶ್ರೀ ಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಮತ್ತು ಗೋ ನವರಾತ್ರಿ ಉತ್ಸವದ ಕಾರ್ಯಾಲಯ ಉದ್ಘಾಟನೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪಾಲ್ಗೊಂಡರು.


ದೀಪ ಬೆಳಗಿಸುವ ಮೂಲಕ ಕಾರ್ಯಾಲಯ ಉದ್ಘಾಟನೆ ಮಾಡಿ ಬಳಿಕ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು.

ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದರು.


























