ಉಪ್ಪಿನಂಗಡಿ : ಕರ್ನಾಟಕ ರಾಜ್ಯಾದ್ಯಂತ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹಲಕ್ಷ್ಮಿ’ ಅನುಷ್ಠಾನದ ಕಾರ್ಯಕ್ರಮ ನಡೆದಿದ್ದು, ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಣಿಗ ಸಮುದಾಯ ಭವನದಲ್ಲಿ ನಡೆದ ವಿವಾಹ ಸಮಾರಂಭದಲ್ಲಿಯೂ ‘ಗೃಹಲಕ್ಷ್ಮೀ’ ಯೋಜನೆ ಕಲರವ ಮೂಡಿಸಿದೆ.

ಉಪ್ಪಿನಂಗಡಿಯ ಸ್ಥಳೀಯ ನಿವಾಸಿಗಳಾದ ರಾಜೇಶ್ವರಿ ಮತ್ತು ವಿಶ್ವ ಎಂಬುವವರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪಾಡಿಯವರು ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಥಿಗಳಿಗೆ ಮತ್ತು ವಧು-ವರರಿಗೆ ಯೋಜನೆಯ ಫಲಕಗಳನ್ನು ನೀಡಿ ಫಲಾನುಭವಿಗಳಿಗೆ ಇದರಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದ್ದು, ಎಲ್ಲರ ಗಮನ ಸೆಳೆಯಿತು.


























