ಸುಬ್ರಹ್ಮಣ್ಯ : ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಇಂದು ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆದಿದ್ದು, ಕುಮಾರಧಾರ ಬಳಿಯಿಂದ ಮೆರವಣಿಗೆ ಆರಂಭಗೊಂಡಿತು. ತೆಂಗಿನಕಾಯಿ ಒಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎದುರುಗಡೆಯ ಬಲ ಭಾಗದ ವೇದಿಕೆಯಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಸೌಜನ್ಯ ತಾಯಿ ಕುಸುಮಾವತಿ ಮತ್ತು ಮಹೇಶ್ ತಿಮರೋಡಿ ಮಾತನಾಡಿದರು. ಬಳಿಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಹಾಗೂ ದೇವಸ್ಥಾನದ ಎದುರು ಪ್ರಾರ್ಥನೆ ಸಲ್ಲಿಸಿದರು.

ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆದ ಈ ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ತಿಮರೋಡಿ ಉಪಸ್ಥಿತರಿದ್ದರು.


ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ, ರವಿಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಒಕ್ಕಲಿಗ ಗೌಡ ಸಂಘ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿದ್ದರು.



ಡಾ. ರವಿ ಕಕ್ಕೆಪದವು, ಗೋಪಾಲ ಎಣ್ಣೆಮಜಲು, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ಗುರುಪ್ರಸಾದ್ ಮೇಲ್ನಾಡ್, ಸತೀಶ್.ಕೆ.ಪಿ. ಕೊಮ್ಮೆಮನೆ, ದಿನೇಶ್ ಶಿರಾಡಿ, ವಿವೇಕಾನಂದ ದೇವರಗದ್ದೆ, ತಿಲಕ್ ಎ.ಎ. ಭಾರತಿ ದಿನೇಶ್, ಶೇಖರ್ ಆಗೋಲಿಕಜೆ ಮೊದಲಾದವರು ಉಪಸ್ಥಿತರಿದ್ದರು.






























