ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯನ್ನು ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು ಹಾಗೂ ಈ ಸಂದರ್ಭದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಕೂಡ ಮಾಡಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಜನನ ಮತ್ತು ಅವರ ಜೀವನ ಸಂದೇಶವನ್ನು ಸಭೆಯಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ತಿಳಿಸಿದರು.

ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರಾದ ಪಿ ಜಿ ಜಗನ್ನಿವಾಸ್ ರಾವ್ ರವರು ರಕ್ಷಾ ಬಂಧನ ಹಬ್ಬದ ಪ್ರಾಸ್ತವಿಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಬೂಡಿಯಾರು ರಾದಕೃಷ್ಣ ರೈ, ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧಕ್ಷರು ಆರ್.ಸಿ ನಾರಾಯಣ, ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಕೆ ಪೆರಿಯಾತ್ತೊಡಿ, ಜಯಶ್ರೀ ಎಸ್ ಶೆಟ್ಟಿ,ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರು ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ,ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ,ಬಿಜೆಪಿ ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾ ಅಧ್ಯಕ್ಷರು ಸುನೀಲ್ ಕುಮಾರ್ ದಡ್ಡು, ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ & ಶಕ್ತಿ ಕೇಂದ್ರ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು & ಉಪಾಧ್ಯಕ್ಷರು, ಪಂಚಾಯತ್ ಮಾಜಿ ಅಧ್ಯಕ್ಷರು & ಉಪಾಧ್ಯಕ್ಷರು, ಬಿಜೆಪಿ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಪ್ರಕೋಷ್ಟಗಳ ಪದಾಧಿಕಾರಿಗಳು, ಮಂಡಲದ ಪ್ರಮುಖರು ಹಾಗೂ ಹಿರಿಯ & ಕಿರಿಯ ಕಾರ್ಯಕರ್ತರು ಭಾಗವಹಿಸಿದರು.


























