ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಜಾಗೃತಿ ಅಭಿಯಾನದ ಭಾಗವಾಗಿ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳು, ಪದಾಧಿಕಾರಿಗಳ ಸಭೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ನೇತೃತ್ವದಲ್ಲಿ ನಡೆಯಿತು.
ಆದರೆ, ಸಭೆಗೆ ಶಾಸಕರಾದ ಎಸ್.ಟಿ. ಸೋಮಶೇಖರ್ ಶಿವರಾಮ ಹೆಬ್ಬಾರ್, ಮಾಜಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ, ವಿ ಸೋಮಣ್ಣ, ಸಿ.ಟಿ ರವಿ ಗೈರಾಗಿದ್ದಾರೆ.
ಆಪರೇಷನ್ ಹಸ್ತದಲ್ಲಿ ಬಿಜೆಪಿ ಶಾಸಕರಾದ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಿಲುಕಿದ್ದಾರೆ ಎಂಬ ವದಂತಿ ಹಬ್ಬಿದ್ದವು. ಈಗಾಗಲೇ ಸೋಮಶೇಖರ್ ಅವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಈ ಇಬ್ಬರು ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸದ್ಯ ಈ ಇಬ್ಬರು ನಾಯಕರು ಬಿ.ಎಲ್.ಸಂತೋಷ್ ಭಾಗಿಯಾಗಿದ್ದ ಸಭೆಗೆ ಗೈರಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಶಿವಮೊಗ್ಗ ವಿಮಾನಯಾನ ಆರಂಭದ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಅರಗ ಜ್ಞಾನೇಂದ್ರ, ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಸಭೆಗೆ ಗೈರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಸಮಸ್ಯೆ ಹಿನ್ನೆಲೆ ಸಭೆಗೆ ಆಗಮಿಸಿಲ್ಲ.
ಕೇಂದ್ರ ಸಚಿವ ನಾರಾಯಣಸ್ವಾಮಿ, ಸಂಸದರಾದ ಡಿ.ವಿ. ಸದಾನಂದ ಗೌಡ, ತೇಜಸ್ವಿ ಸೂರ್ಯ, ಈರಣ್ಣ ಕಡಾಡಿ, ಶಾಸಕರಾದ ರಮೇಶ್ ಜಾರಕಿಹೊಳಿ, ಶ್ರೀವತ್ಸ, ನಿಖಿಲ್ ಕತ್ತಿ, ಪರಾಜಿತ ಅಭ್ಯರ್ಥಿಗಳಾದ ಪ್ರತಾಪ್ ಗೌಡ ಪಾಟೀಲ್, ಮಹೇಶ್ ಕುಮಟಳ್ಳಿ, ಜಿ.ಹೆಚ್. ತಿಪ್ಪಾರೆಡ್ಡಿ, ರೂಪಾಲಿ ನಾಯಕ್, ಬಿ.ಸಿ. ಪಾಟೀಲ್, ಡಾ. ಕೆ. ಸುಧಾಕರ್, ಡಿ.ಎನ್. ಜೀವರಾಜ್, ಬಸವರಾಜ ದಡೇಸೂಗೂರು, ಬೆಳ್ಳಿ ಪ್ರಕಾಶ್, ಗೋವಿಂದ ಕಾರಜೋಳ, ಪಿ. ರಾಜೀವ್, ಸಂಜಯ್ ಪಾಟೀಲ್, ಬಿ.ಸಿ. ನಾಗೇಶ್, ಸಪ್ತಗಿರಿ ಗೌಡ, ಪ್ರೀತಮ್ ಗೌಡ, ಎನ್. ಮಹೇಶ್, ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರು ಭಾಗಿಯಾದರು ಎಂದು ವರದಿಯಾಗಿದೆ..


























